ಕೊಲ್ಹಾಪುರ: ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದ್ದ ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ, ಕೊಲ್ಹಾಪುರದಲ್ಲೂ ಅಂತಹದ್ದೇ ಭೀಕರ ಪ್ರಕರಣವೊಂದು (Amravati 2.0) ಬೆಳಕಿಗೆ ಬಂದಿದೆ. ಯುವತಿಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಫಾರ್ಮಸಿ ವಿದ್ಯಾರ್ಥಿ ಶಾಹಿದ್ ಸಮೀರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಶಾಹಿದ್ ಸಾಮಾಜಿಕ ಮಾಧ್ಯಮಗಳ ಮೂಲಕ ಯುವತಿಯರೊಂದಿಗೆ ಸ್ನೇಹ ಬೆಳೆಸುತ್ತಿದ್ದ. ನಂತರ ಅವರನ್ನು ಕೊಲ್ಹಾಪುರ ಮತ್ತು ಶಿರೋಲಿಯ ವಿವಿಧ ಲಾಡ್ಜ್‌ಗಳಿಗೆ ಕರೆದೊಯ್ಯುತ್ತಿದ್ದನು. ಅಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದಲ್ಲದೆ, ರಹಸ್ಯವಾಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು. ಈ ವಿಡಿಯೋಗಳನ್ನು ಮುಂದಿಟ್ಟುಕೊಂಡು ಸಂತ್ರಸ್ತೆಯರನ್ನು ಬ್ಲ್ಯಾಕ್‌ಮೇಲ್ ಮಾಡಿ ಪದೇ ಪದೇ ದೌರ್ಜನ್ಯ ಎಸಗುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

20 ವರ್ಷದ ಯುವತಿಯೊಬ್ಬಳು ಏಪ್ರಿಲ್ 26ರಂದು ಧೈರ್ಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಕರಾಳ ಜಾಲ ಬಯಲಾಗಿದೆ. ದೂರಿನ ಅನ್ವಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆತನನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಈ ವಿಡಿಯೋಗಳನ್ನು ತನ್ನ ಸ್ನೇಹಿತರೊಂದಿಗೂ ಹಂಚಿಕೊಂಡಿದ್ದ ಎನ್ನಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ಹಿಂದೂ ಸಂಘಟನೆಗಳ ಆಕ್ರೋಶ:
ಆರೋಪಿ ಸುಮಾರು 10ಕ್ಕೂ ಹೆಚ್ಚು ಯುವತಿಯರನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಶಿವ ಪ್ರತಿಷ್ಠಾನ್ ಹಿಂದೂಸ್ತಾನ್ ಮತ್ತು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ. ಪೊಲೀಸರಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆಗಳು, ಪ್ರಕರಣದ ಸೂಕ್ತ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿವೆ.

ಈ ವಿಕೃತ ಕಾಮುಕನಿಂದ ಬಾಧಿತರಾದ ಇತರ ಯುವತಿಯರೂ ಮುಂದೆ ಬಂದು ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಪ್ರಕರಣವು ಅಮರಾವತಿಯ ಮೊಹಮ್ಮದ್ ಅಯಾಜ್ ಪ್ರಕರಣದಂತೆಯೇ ಇರುವುದು ಇಡೀ ಮಹಾರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.