ವಿವಿ ಆವರಣದಲ್ಲಿ ಕಸ ಸುಟ್ಟರೆ ಹುಷಾರ್: ಮಂಗಳೂರು ವಿವಿಗೆ ಬಿತ್ತು ಭಾರಿ ದಂಡ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲ ಮಂಗಳ ಗಂಗೋತ್ರಿಯ ಆವರಣದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ವಿಶ್ವವಿದ್ಯಾನಿಲಯಕ್ಕೆ ₹25,000 ದಂಡ ವಿಧಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪಂಚಾಯತ್ ಈ ಕಠಿಣ ಕ್ರಮ ಕೈಗೊಂಡಿದೆ.

ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರಂತರವಾಗಿ ಕಸ ಸುಡಲಾಗುತ್ತಿದೆ ಎಂಬ ಬಗ್ಗೆ ಗ್ರಾಮ ಪಂಚಾಯತ್‌ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಬುಧವಾರ (ಏಪ್ರಿಲ್ 29, 2026) ಕೊಣಾಜೆ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜಂಟಿಯಾಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದರು.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ⬇️

ಪರಿಶೀಲನೆಯ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಕಸವನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡುವ ಬದಲಾಗಿ, ರಾಶಿ ಹಾಕಿ ಸುಡುತ್ತಿರುವುದು ಪತ್ತೆಯಾಗಿದೆ. ಈ ರೀತಿ ಕಸ ಮತ್ತು ಪ್ಲಾಸ್ಟಿಕ್ ಸುಡುವುದರಿಂದ ಹೊರಬರುವ ಹೊಗೆ ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿದೆ ಎಂದು ವೈದ್ಯಾಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯ ಆಧಾರದ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ದಂಡದ ನೋಟಿಸ್ ಜಾರಿ ಮಾಡಿದ್ದಾರೆ.

ಎಫ್‌ಐಆರ್ ದಾಖಲಿಸುವ ಎಚ್ಚರಿಕೆ:
ವಿಧಿಸಲಾಗಿರುವ ₹25,000 ದಂಡದ ಮೊತ್ತವನ್ನು ಮುಂದಿನ 10 ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಪಂಚಾಯತ್ ಸೂಚಿಸಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದಲ್ಲಿ ವಿಶ್ವವಿದ್ಯಾನಿಲಯದ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

error: Content is protected !!