ಜಿಟಿಟಿಸಿ ಮಂಗಳೂರು: 2026-27ನೇ ಸಾಲಿನ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC Mangaluru) 2026-27ನೇ ಸಾಲಿನ ಮೂರು ವರ್ಷಗಳ ಅವಧಿಯ ವಿವಿಧ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಅವರು ತಿಳಿಸಿದರು.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್‌ಗೆ 60 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್‌ಗೆ 30 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಅಲ್ಲದೆ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಕೋರ್ಸ್‌ಗೆ 60 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಪಿಯುಸಿ (ವಿಜ್ಞಾನ) ಹಾಗೂ ಐಟಿಐ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇಲ್ಲಿನ ಎಲ್ಲಾ ಕೋರ್ಸ್‌ಗಳಲ್ಲಿ ಶೇ. 30ರಷ್ಟು ಸೈದ್ಧಾಂತಿಕ (Theory) ಹಾಗೂ ಶೇ. 70ರಷ್ಟು ಪ್ರಾಯೋಗಿಕ (Practical) ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದವರು ವಿವರಿಸಿದರು.

ಶಿಷ್ಯವೇತನ ಮತ್ತು ಉದ್ಯೋಗಾವಕಾಶ:
ಈ ಕೋರ್ಸ್‌ಗಳನ್ನು ಅಧ್ಯಯನ ಮಾಡುವಾಗ ಒಂದು ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ತರಬೇತಿ ನೀಡಲಾಗುವುದು. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ 15,000 ರಿಂದ 20,000 ರೂಪಾಯಿ ಶಿಷ್ಯವೇತನ ನೀಡಲಾಗುತ್ತದೆ. ಇಲ್ಲಿಯವರೆಗೆ ಈ ಕೇಂದ್ರದಿಂದ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡಿಪ್ಲೋಮಾ ಪದವಿ ಪಡೆದಿದ್ದು, ದೇಶ-ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಾಂಶುಪಾಲರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯಜ್ನೇಶ್‌ ಶೆಟ್ಟಿಗಾರ್, ಪ್ರಮಿತ್ ಶೆಟ್ಟಿ, ಝಿಟಾ ಡಿಸೋಜ ಮತ್ತು ಗೌತಮ್ ಉಪಸ್ಥಿತರಿದ್ದರು.

error: Content is protected !!