ದಾವಣಗೆರೆಯಲ್ಲಿ ಅರಳಿದ ʻಸಮರ್ಥ’ ನಾಯಕ: ಮತದಾರರಿಗೆ ಧನ್ಯವಾದ ಸಲ್ಲಿಸಿದ ಶಾಸಕ ಮಂಜುನಾಥ ಭಂಡಾರಿ

ದಾವಣಗೆರೆ: ಇಡೀ ರಾಜ್ಯದ ಗಮನ ಸೆಳೆದಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವಿಗೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಉಪಚುನಾವಣೆಯ ಮೇಲುಸ್ತುವಾರಿಯಾಗಿದ್ದ ಮಂಜುನಾಥ ಭಂಡಾರಿ ಅಭಿನಂದನೆಗಳನ್ನು ಸಲ್ಲಿಸಿದ್ದು, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ಗೆಲುವಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ನಿರಂತರ ಶ್ರಮ ಮತ್ತು ಸಂಘಟನಾ ಚಾತುರ್ಯವೇ ಕಾರಣ. ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ನಡುವಿನ ಸಮನ್ವಯತೆಯಿಂದಾಗಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಪ್ರಚಾರ ಕಾರ್ಯ ನಡೆಸಿದ್ದು ಸಮರ್ಥ್‌ ಶಾಮನೂರು ಗೆಲುವಿಗೆ ಪ್ರಮುಖ ಕಾರಣವಾಯಿತು ಎಂದು ಭಂಡಾರಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: Content is protected !!