ಹೊತ್ತಿ ಉರಿದ ಪಲ್ಲಕ್ಕಿ ಬಸ್; 17 ಮಂದಿ ಅಪಾಯದಿಂದ ಪಾರು

ಹಾವೇರಿ: ಬೆಂಗಳೂರಿನಿಂದ ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಚಾಲಕ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

error: Content is protected !!