ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ!

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯು ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ . ವಿಶೇಷವಾಗಿ ಆತನ ಬಲಗೈಯಲ್ಲಿ ಕೆಂಪು ದಾರವಿರುವುದು ಕಂಡುಬಂದಿದೆ. ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಚಹರೆಯುಳ್ಳ ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದಲ್ಲಿ ಅಥವಾ ಮಾಹಿತಿ ಲಭ್ಯವಿದ್ದಲ್ಲಿ, ಕೂಡಲೇ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

error: Content is protected !!