ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ: ಪೈಲಟ್ ಸೇರಿ ಮೂವರು ಸಾ*ವು

ಬ್ರೆಸಿಲಿಯಾ: ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ನಡೆದಿದೆ.

ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ.

ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

error: Content is protected !!