
ಬೆಂಗಳೂರು: ರಾಜ್ಯ ಬಿಜೆಪಿಯ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ(52) ಬುಧವಾರ(ಮೇ 6) ಬೆಳಗ್ಗೆ 10:30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ಬಾಗಲಕೋಟೆಯವರಾದ ಜಗದೀಶ್ ಹಿರೇಮನಿ ಎಬಿವಿಪಿ ಮೂಲಕ ವಿದ್ಯಾರ್ಥಿ ದಿಸೆಯಲ್ಲಿ ಸಾರ್ವಜನಿಕ ಜೀವನ ಪ್ರವೇಶಿಸಿದರು. ಕೇಂದ್ರ ಸರಕಾರದ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಬಿಜೆಪಿಯ ಪ್ರಶಿಕ್ಷಣ ವಿಭಾಗದ ಸಂಚಾಲನಾ ತಂಡದಲ್ಲಿದ್ದರು.

ಇಂದು ಅಪರಾಹ್ನ 2ರಿಂದ ಸಂಜೆ 4ರವರೆಗೆ ಮಲ್ಲೇಶ್ವರದಲ್ಲಿರುವ ಬಿಜೆಪಿಯ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮೃತದೇಹವನ್ನು ಅವರ ಹುಟ್ಟೂರಾದ ಬಾಗಲಕೋಟೆಗೆ ಕೊಂಡೊಯ್ಯಲಾಗುತ್ತದೆ. ಗುರುವಾರ ಬಾಗಲಕೋಟೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದುಬಂದಿದೆ.