ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ!

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆತರಲು 10 ಸಾವಿರ ಬಸ್​​​ಗಳನ್ನ ಬುಕ್ ಮಾಡಲಾಗಿದೆ.

ಹಾಗಾಗಿ ಸಾಮಾನ್ಯವಾಗಿ ಮೇ 9ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.

error: Content is protected !!