ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ನಗರದ ಬೈಕಂಪಾಡಿಯಲ್ಲಿರುವ ಜಿ.ಟಿ.ಟಿ.ಸಿ. ಡಿಪ್ಲೊಮಾ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೇ 13 ಕೊನೆಯ ದಿನ ಎಂದು ಜಿಟಿಟಿಸಿ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಪ್ರಿಶಿಷನ್ ಮಾನ್ಯುಫ್ಯಾಕ್ಚರಿಂಗ್ ಮತ್ತು ಡಿಪ್ಲೊಮಾ ಇನ್ ಆರ್ಟಿಫೀಶಿಯಲ್ ಇಂಟಲಿಜನ್ಸ್ ಕೋರ್ಸುಗಳಿವೆ. ಮೊದಲ ಎರಡು ಕೋರ್ಸ್‌ಗಳು ಮೆಕ್ಯಾನಿಕ್ ಇಂಜಿನಿಯರಿಂಗ್‌ಗೂ ಮತ್ತು ಮೂರನೆಯದು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್‌ಗೆ ಸಂಬಂಧಿಸಿದ್ದಾಗಿದೆ. ಈ ಎಲ್ಲಾ ಕೋರ್ಸುಗಳಿಗೆ ಸೇರಬಯಸುವ ವಿದ್ಯಾರ್ಥಿಗಳ ಕನಿಷ್ಠ ವಿದ್ಯಾರ್ಹತೆ ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು. ಈ ಕೋರ್ಸುಗಳ ಅವಧಿ 4 ವರ್ಷಗಳಾಗಿದ್ದು, 4ನೇ ವರ್ಷದಲ್ಲಿ ವಿದ್ಯಾರ್ಥಿಗಳನ್ನ ಪ್ರತಿಷ್ಠಿತ ಕೈಗಾರಿಕೆಗಳಿಗೆ ಒಂದು ವರ್ಷದ ಕಡ್ಡಾಯ ಇಂಟರ್ನಶಿಪ್‌ಗೆ ಕಳಿಸಲಾಗುವುದು.

ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪ್ರತಿ ತಿಂಗಳು 18,000 ರೂ.ನಿಂದ 23,000 ರೂ.ವರೆಗೆ ಸ್ಟೈಪೆಂಡ್ ಪಡೆಯುತ್ತಾರೆ. ಜಿ.ಟಿ.ಟಿ.ಸಿ.ಯಲ್ಲಿ ಕಲಿತ ವಿದ್ಯಾರ್ಥಿಗಳು ಕರ್ನಾಟಕವು ಸೇರಿದಂತೆ ದೇಶ, ವಿದೇಶಗಳಲ್ಲಿನ ಪ್ರತಿಷ್ಠಿತ ಕಂಪೆನಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ಬಹಳಷ್ಟು ಪ್ರಗತಿಯನ್ನು ಸಾಧಿಸಿದ್ದಾರೆ ಎಂದು ವಿವರಿಸಿದರು.

error: Content is protected !!