ಮೇ 9 ,10: ಎಲ್‌.ಸಿ.ಎಲ್. ಸೀಸನ್-5 ಹಿರಿಯರ ಕ್ರಿಕೆಟ್ ಹಬ್ಬ

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಕ್ಲಬ್, ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ವಯಸ್ಸಿಗೂ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆರ್ಮ್ ಕ್ರಿಕೆಟ್ ಟೂರ್ನಿ “ಎಲ್‌.ಸಿ.ಎಲ್. ಸೀಸನ್-5 ಹಿರಿಯರ ಕ್ರಿಕೆಟ್ ಹಬ್ಬ” ಮೇ 9 ಮತ್ತು 10ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 12 ತಂಡಗಳು ಭಾಗವಹಿಸಲಿವೆ. ಆರು ಓವರ್‌ಗಳ ಟೂರ್ನಿ ಇದಾಗಿದ್ದು, ವಿಜೇತ ತಂಡಕ್ಕೆ ರೂ.1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ರೂ. 50 ಸಾವಿರ ಮತ್ತು ಟ್ರೋಫಿ ನೀಡಲಾಗುವುದು ಎಂದು ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಕಿರಣ್ ಹೊಸಬೆಟ್ಟು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೇ 9ರ ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, 10ರ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಸಂದರ್ಭ ಕ್ಲಬ್‌ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಸದಸ್ಯ ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು.

error: Content is protected !!