
ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ನಡೆದಿದೆ.

ಸಂಜಯ್ ಎರಡನೇ ಮದುವೆಯಾಗಿದ್ದ. ಆದರೆ ಕುಡಿತದ ಚಟದಿಂದಾಗಿ ಎರಡನೇ ಪತ್ನಿ ಆತನನ್ನು ಬಿಟ್ಟು ಹೋಗಿ, ಪ್ರತ್ಯೇಕವಾಗಿ ವಾಸವಾಗಿದ್ದಳು. ಘಟನೆ ದಿನ ಪತ್ನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಪತಿ ಏಕಾಏಕಿ ಅಡ್ಡಗಟ್ಟಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿ, ಪತಿಗೆ ಧರ್ಮದೇಟು ನೀಡಿ ಹಿಗ್ಗಾಮುಗ್ಗ ಥಳಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಪತಿಯನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.