ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ

ಮೂಡುಬಿದಿರೆ: ಪಕ್ಷಿಕೆರೆಯಿಂದ ಮೂಡುಬಿದಿರೆಯ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಚಾಲಕ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಇಂದು(ಮೇ 7) ಸಂಭವಿಸಿದೆ.

ಮೂಲಗಳ ಪ್ರಕಾರ, ಕೆಎ-20 ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರು ಬೆಳಗಿನ ಜಾವ ಸುರಿದ ಮಳೆಯ ನಂತರ ತಿರುವು ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಯಲ್ಲಿ ಎಣ್ಣೆಯ ಅವಶೇಷಗಳು ಕಂಡುಬಂದಿವೆ ಎನ್ನಲಾಗಿದೆ.

ಅದೃಷ್ಟವಶಾತ್, ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

error: Content is protected !!