ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿ: ವಿದ್ಯಾರ್ಥಿ ಸಾವು, 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ

ದಾವಣಗೆರೆ: ಸಾರಿಗೆ ಬಸ್ ಆ್ಯಕ್ಸಲ್ ತುಂಡಾಗಿ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದರ್ಶನ್ (21) ಅಪಘಾತದಲ್ಲಿ ಮೃತಪಟ್ಟ ಯುವಕ.

ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

error: Content is protected !!