ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾ*ವು

ಬೆಂಗಳೂರು: ಎಂ.ಜಿ. ರಸ್ತೆಯ ಅನಿಲ್‌ ಕುಂಬ್ಳೆ ವೃತ್ತದ ಬಳಿ ಶುಕ್ರವಾರ(ಮೇ.8) ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿದ್ದಾರೆ.

ಶ್ರೀನಿವಾಸ್‌ (55) ಮೃತ ದುರ್ದೈವಿ.

ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಅನಿಲ್‌ ಕುಂಬ್ಳೆ ವೃತ್ತದ ಸಮೀಪ ಶ್ರೀನಿವಾಸ್‌ ನಡೆದುಕೊಂಡು ಹೋಗುತ್ತಿದ್ದರು. ಆಗ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಶ್ರೀನಿವಾಸ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಬ್ಬನ್‌ಪಾರ್ಕ್‌ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ರಸ್ತೆ ಅಪಘಾತ ಎಸಗಿದ ವಾಹನ ಚಾಲಕ ಹಾಗೂ ವಾಹನಕ್ಕಾಗಿ ಸಿಸಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ.

error: Content is protected !!