ತಾಯಿಯ ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ಅಪ್ರಾಪ್ತೆಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ: ಆರೋಪಿ ವಶಕ್ಕೆ

ಬಳ್ಳಾರಿ: ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಡಿ-ಗ್ರೂಪ್ ನೌಕರ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಆಸ್ಪತ್ರೆಯ ಡಿ-ಗ್ರೂಪ್ ನೌಕರ ಅಜಯ್ ಮದಕರಿ (37) ಬಂಧಿತ ಆರೋಪಿ.

ಚಿಕಿತ್ಸೆಗಾಗಿ ತಾಯಿಯನ್ನು ಅಪ್ರಾಪ್ತ ಬಾಲಕಿ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಳು. ಈ ವೇಳೆ ಆರೋಪಿ ಬಾಲಕಿಯನ್ನು ಪುಸಲಾಯಿಸಿ ತನ್ನ ಕ್ವಾಟ್ರಸ್‌ಗೆ ಕರೆದೊಯ್ದಿದ್ದ. ಅಲ್ಲಿ ಮತ್ತು ಬರುವ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ ಎಂದು ಹೊಸಪೇಟೆ ಬಡಾವಣೆ ಠಾಣೆಯಲ್ಲಿ ತಾಯಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.

ಸದ್ಯ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

error: Content is protected !!