ಸಂಘದ ಒಗ್ಗಟ್ಟು ಕಾರ್ಯಸಾಧನೆ ಕ್ರೀಡಾಶಕ್ತಿ ಇತರ ಸಂಘಗಳಿಗೆ ಮಾದರಿಯಾಗಿದೆ: ವಿದ್ಯೇಂದ್ರ ತೀರ್ಥ ಶ್ರೀಪಾದರು

ಸುರತ್ಕಲ್ : ಸ್ಪೋರ್ಟ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರಿಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು ಕಾರ್ಯಸಾಧನೆ ಕ್ರೀಡಾಶಕ್ತಿ ಇತರ ಸಂಘಗಳಿಗೆ ಮಾದರಿಯಾಗಿದೆ ಎಂದು ಶ್ರೀ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಅಡಳಿತ ಮೊಕ್ತೇಸರರು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಎರಡು ದಿನದ ಹಿರಿಯರ ಕ್ರಿಕೆಟ್ ಹಬ್ಬ ಪಂದ್ಯಾಟ ಸೀಸನ್ 5 ನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ, ಮಾಜಿ ಶಾಸಕರಾದ ಮೊಯಿದಿನ್ ಬಾವ, ಬಿ.ಎ.ಎಸ್.ಎಪ್ ಸಂಸ್ಥೆಯ ಎಚ್ ಅರ್ ವಿಭಾಗದ ಸೀನಿಯರ್ ಮ್ಯಾನೇಜರ್ ಸಂತೋಷ್ ಪೈ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಶೆಟ್ಟಿ, ಉದ್ಯಮಿ ಸುರೇಂದ್ರ ಶೆಟ್ಟಿ ಅರಂತಬೆಟ್ಟು, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಸುರತ್ಕಲ್ ಚಾವಡಿ ಹಾಲ್ ಮಾಲಕರಾದ ಡಿ.ಕೆ.ಶೆಟ್ಟಿ ಸೂರಿಂಜೆ, ಕರಾಟೆ ಶಿಕ್ಷಕ ಈಶ್ವರ್ ಕಟೀಲು, ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ರಾದ ಶಂಕರ್ ನಾರಾಯಣ್ ಭಟ್, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್,ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ವಹಿಸಿದರು. ಕ್ಲಬ್ ಸದಸ್ಯ ಕುಶಲ ಮಣಿಯಾಣಿ ಸ್ವಾಗತಿಸಿ ಸದಸ್ಯ ಪುಷ್ಷರಾಜ್ ಶೆಟ್ಟಿ ಮಧ್ಯ ಧನ್ಯವಾದ ಸಮರ್ಪಿಸಿ ಕ್ಲಬ್ ನ ಕಾರ್ಯದರ್ಶಿ ಕಿರಣ್ ಅಚಾರ್ಯ ಹೊಸಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

error: Content is protected !!