ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ ಗಾಯ


ಶಿವಮೊಗ್ಗ: ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಮದುವೆ ದಿಬ್ಬಣದ ಬಸ್​​ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ.

ಸಿದ್ದಾಪುರದಿಂದ ಹಾನಗಲ್‌ನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದ್ದು, ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಬಸ್​​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದು, ಮೂವರು ಗಂಬೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!