ಕಾರು-ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾ*ವು, ಸಹಸವಾರೆ ಗಂಭೀರ

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದು, ಸಹ ಸವಾರೆ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭಾನುವಾರ(ಮೇ 10) ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಸದಾನಂದ ಆಚಾರ್ಯ (59) ಮೃತ ಸವಾರ.

ದಂಪತಿ ಅರಸಿನಮಕ್ಕಿಯಿಂದ ಕೊಕ್ಕಡ ಮಾರ್ಗವಾಗಿ ಉಪ್ಪಿನಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಗೋಳಿತ್ತೊಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಗೆ ಇವರು ಪ್ರವೇಶಿಸುತ್ತಿದ್ದಂತೆಯೇ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸದಾನಂದ ಆಚಾರ್ಯ ಅವರು ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಅವರ ಪತ್ನಿ ಉಷಾ ಅವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!