ಭಾರತ ಮತ್ತು MIOಗೆ ಹೆಮ್ಮೆಯ ಕ್ಷಣ: ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರಿಗೆ ಪ್ರತಿಷ್ಠಿತ ಯುರೋಪಿಯನ್ ಪಥಾಲಜಿ ಗೌರವ

ಮಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ ಯೊಂದಿಗೆ ಪಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಪ್ರತಿಷ್ಠಿತ European Society of Pathology Academy 2026 ಗೆ ಆಯ್ಕೆಯಾಗಿದ್ದಾರೆ.

ಪಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆಯನ್ನು ಗುರುತಿಸಿ ಈ ಗೌರವ ಲಭಿಸಿದ್ದು, 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ ಪುರಸ್ಕೃತರು ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಆಗಿದ್ದಾರೆ.

ಈ ಪ್ರತಿಷ್ಠಿತ ಅಂತರರಾಷ್ಟ್ರೀಯ ಮಾನ್ಯತೆಗೆ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರನ್ನು MIO ಆಡಳಿತ ಮಂಡಳಿ, ವೈದ್ಯರು ಹಾಗೂ ಸಿಬ್ಬಂದಿ ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

ಈ ಸಾಧನೆ MIO ಸಂಸ್ಥೆಯಲ್ಲಿನ ಶೈಕ್ಷಣಿಕ ಗುಣಮಟ್ಟ ಮತ್ತು ಉತ್ತಮ ಕ್ಯಾನ್ಸರ್ ನಿರ್ಣಯ ಹಾಗೂ ಚಿಕಿತ್ಸೆಯತ್ತ ಇರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಅವರ ಮುಂದಿನ ಶೈಕ್ಷಣಿಕ ಹಾಗೂ ಸಂಶೋಧನಾ ಕಾರ್ಯಗಳಿಗೆ MIO ವತಿಯಿಂದ ಶುಭ ಹಾರೈಕೆಗಳನ್ನು ತಿಳಿಸಲಾಗಿದೆ.

error: Content is protected !!