
ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ.

ಮಾಕವಳ್ಳಿ ಗ್ರಾಮದ ಅಭಿಷೇಕ್(26) ಮೃತ ಯುವಕ.
ಇದೇ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಭಾನುವಾರ(ಮೇ 10) ಸಂಜೆ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಭಿಷೇಕ್ ಆಡಿಯೋ ರೆಕಾರ್ಡ್ ಆಧರಿಸಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
