ಪ್ರೀತಿಸಿದವನ ಜೊತೆ ಮದುವೆಗೆ ಕುಟುಂಬಸ್ಥರಿಂದ ವಿರೋಧ: ಮನನೊಂದ ಯುವತಿ ಆತ್ಮಹ*ತ್ಯೆಗೆ ಶರಣು

ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ಅಡ್ಡಿ ಪಡಿಸಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ.

ಶ್ವೇತಾ ಕೊಟೆನ್ನವರ್(18) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮೃತ ಯುವತಿ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇದರಿಂದ ಮನನೊಂದ ಶ್ವೇತಾ ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!