
ಬೀದರ್: ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ತಾಡೋಳಾ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ 65ರ ಬಳಿ ಇಂದು(ಮೇ 11) ನಡೆದಿದೆ.

ಜಾಫರ್ ವಾಡಿ ಗ್ರಾಮದ ನಿವಾಸಿ ಶಿವಕುಮಾರ್ (30) ಅಪಘಾತದಲ್ಲಿ ಮೃತಪಟ್ಟ ಯುವಕ.

ಹುಮನಾಬಾದ್‌ನಿಂದ ಬಸವಕವಲ್ಯಾಣದ ಕಡೆ ಬರುತ್ತಿದ್ದ ಕಾರಿಗೆ ಬಸವಕಲ್ಯಾಣದಿಂದ ಹುಮನಾಬಾದ್‌ಗೆ ವಿರುದ್ಧ ಧಿಕ್ಕಿನಲ್ಲಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.