ಲ್ಯಾಂಡಿಂಗ್ ವೇಳೆ ಟರ್ಕಿಶ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ; ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಕಠ್ಮಂಡು: ಇಸ್ತಾನ್‌ಬುಲ್‌ನಿಂದ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿರುವಂತಹ ಘಟನೆ ಇಂದು(ಮೇ 11) ಮುಂಜಾನೆ ನಡೆದಿದೆ.

ವಿಮಾನದಲ್ಲಿ 11 ಜನ ಸಿಬ್ಬಂದಿ ಹಾಗೂ 278 ಪ್ರಯಾಣಿಕರಿದ್ದರು. ಲ್ಯಾಂಡ್ ಆಗುವಾಗ ಏಕಾಏಕಿ ಬಲಭಾಗದ ಟೈರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಅಷ್ಟರಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಟರ್ಕಿಶ್ ವಿಮಾನಯಾನ ಸಂಸ್ಥೆ ಹಾಗೂ ವಿಮಾನ ನಿಲ್ದಾಣ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

error: Content is protected !!