ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಿಎಂ ವಿಜಯ್ ಭರ್ಜರಿ ಬ್ಯಾಟಿಂಗ್!!

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಭರ್ಜರಿ ಬ್ಯಾಟಿಂಗ್ ಆರಂಭಿಸಿದ್ದಾರೆ.

ತಮ್ಮ ಮೊದಲ ಆಡಳಿತಾತ್ಮಕ ನಿರ್ಧಾರದಲ್ಲೇ ರಾಜ್ಯದ ಶಾಲಾ-ಕಾಲೇಜು ಹಾಗೂ ಧಾರ್ಮಿಕ ಕೇಂದ್ರಗಳ ಸಮೀಪವಿರುವ 717 ಸರ್ಕಾರಿ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನ, ಮಸೀದಿ, ಚರ್ಚ್‌ಗಳು ಸೇರಿದಂತೆ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್‌ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಕಾರ್ಯಾಚರಿಸುತ್ತಿರುವ ಮದ್ಯದಂಗಡಿಗಳನ್ನು ಮುಂದಿನ ಎರಡು ವಾರಗಳಲ್ಲಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿರುವ ಒಟ್ಟು 4,765 ಮದ್ಯದಂಗಡಿಗಳ ಪೈಕಿ 717 ಅಂಗಡಿಗಳಿಗೆ ಈ ಆದೇಶದಿಂದ ಬೀಗ ಬೀಳಲಿದೆ.

ಕೇವಲ ಮದ್ಯದಂಗಡಿಗಳ ಬಂದ್ ಮಾತ್ರವಲ್ಲದೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಗಳಿಗೂ ಸಿಎಂ ವಿಜಯ್ ಚಾಲನೆ ನೀಡಿದ್ದಾರೆ.

  • ಮನೆ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ
  • ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಡೆ ರಚನೆಗೆ ಆದೇಶ.
  • ಪ್ರತಿ ಜಿಲ್ಲೆಯಲ್ಲೂ ಡ್ರಗ್ಸ್ ವಿರೋಧಿ ಘಟಕಗಳ ಸ್ಥಾಪನೆಗೆ ಹಸಿರು ನಿಶಾನೆ.

ಟಿವಿಕೆ ಪಕ್ಷದ ಮೂಲಕ ರಾಜ್ಯದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ 51 ವರ್ಷದ ವಿಜಯ್, ಕಾಂಗ್ರೆಸ್, ಎಡಪಕ್ಷಗಳು, ವಿಸಿಕೆ ಮತ್ತು ಮುಸ್ಲಿಂ ಲೀಗ್ ಬೆಂಬಲದೊಂದಿಗೆ ತಮಿಳುನಾಡಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರ ರಚಿಸಿದ್ದಾರೆ.

error: Content is protected !!