
ಮಂಗಳೂರು: 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ಸಿಯಾಗಿದ್ದಾರೆ.

ನ್ಯಾಯಾಲಯವು ಆರೋಪಿತನ ಮೇಲೆ ದಸ್ತಗಿರಿ ವಾರಂಟ್‌ನ್ನು ಹೊರಡಿಸಿತ್ತು. ಬಳಿಕ ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರದ ಬಳಿ ಮೇಲಾಧಿಕಾರಿಗಳ ನಿರ್ದೇಶನದಂತೆ, ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ಮಾರ್ಗದರ್ಶನದಲ್ಲಿ, ಠಾಣಾ ಸಿ ಹೆಚ್ ಸಿ ಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

