ಮಂಗಳೂರು: ಕಾಲ್ ಸೆಂಟರ್ ಉದ್ಯೋಗಿ ಪಲ್ಲವಿ ನಿಗೂಢ ನಾಪತ್ತೆ

ಮಂಗಳೂರು: ನಗರದ ಫಳ್ನೀರ್‌ನಲ್ಲಿರುವ ಕಾಲ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವತಿಯನ್ನು ಪಲ್ಲವಿ(21) ಎಂದು ಗುರುತಿಸಲಾಗಿದ್ದು, ಇವರು ಪಚ್ಚನಾಡಿ ಗ್ರಾಮದ ಭಟ್ರಕೋಳಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಪಲ್ಲವಿ ಅವರು ಮೇ 10ರಂದು ಬೆಳಿಗ್ಗೆ ಎಂದಿನಂತೆ ಮನೆಯಿಂದ ಕೆಲಸಕ್ಕೆಂದು ಹೊರಟಿದ್ದರು. ಆದರೆ ಸಂಜೆಯಾದರೂ ಅವರು ಮನೆಗೆ ಮರಳದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಎಲ್ಲೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಕಾಣೆಯಾದ ದಿನ ಗುಲಾಬಿ ಬಣ್ಣದ ಟಾಪ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.

ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪಲ್ಲವಿ ಅವರ ಮೊಬೈಲ್ ಕರೆಗಳ ವಿವರ (CDR) ಹಾಗೂ ಕಾಲ್ ಸೆಂಟರ್ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಯುವತಿಯ ನಾಪತ್ತೆಗೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬರಬೇಕಿದೆ.

error: Content is protected !!