ಕೆಕೆಆರ್‌ಟಿಸಿ-ಬೈಕ್‌ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾ*ವು

ಬೀದರ್: ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕರ್ನಾಟಕ ತೆಲಂಗಾಣ ಗಡಿಯ ಬೀದರ್-ಜಹೀರಾಬಾದ್‌ ರಸ್ತೆಯಲ್ಲಿ ಇಂದು(ಮೇ 12) ಮಧ್ಯಾಹ್ನ ನಡೆದಿದೆ.

ಬೀದರ್ ತಾಲ್ಲೂಕಿನ ಬಂಗ್ಲಾ ಮರ್ಜಾಪುರ ಗ್ರಾಮದ ನರಸಿಂಹಲು (54), ಅರುಣ್ (22) ಮೃತರು.

ಔರಾದ್‌ ತಾಲೂಕಿನ ಕೌಠಾ ಗ್ರಾಮದಲ್ಲಿ ನಾಳೆ (ಮೇ 13) ಸಂಬಂಧಿಕರ ಮದುವೆ ಹಿನ್ನೆಲೆ ಊರಿನಿಂದ ಕಡೆಯಿಂದ ಬೈಕ್‌ ಮೇಲೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಬೀದರ್‌ ಕಡೆಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಬಸ್ ನಡುವಿನ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದ ವೇಳೆ ಕೆಕೆಆರ್‌ಟಿಸಿ ಬಸ್​ ಪಲ್ಟಿಯಾಗಿ ಬಸ್ಸಿನಲ್ಲಿದ್ದ 13 ಮಂದಿ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಬ್ರಿಮ್ಸ್‌ಗೆ ಸಾಗಿಸಲಾಗಿದೆ.

error: Content is protected !!