ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!!

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಂದು(ಮೇ 13) ಗುರುಗ್ರಾಮ್‌ನ ಮೇದಾಂತ – ದಿ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವರ್ಷ ಜನವರಿಯಿಂದ ಇದು ಮೂರನೇ ಬಾರಿ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವ ಘಟನೆ ಎನ್ನಲಾಗಿದೆ. ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಪ್ರಸ್ತುತ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಮಾರ್ಚ್ ತಿಂಗಳ ಆರಂಭದಲ್ಲಿ, ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ಅವರಿಗೆ ವ್ಯವಸ್ಥಿತ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರತಿಜೀವಕ ಔಷಧಿಗಳನ್ನು ನೀಡಲಾಗಿತ್ತು.

ಸೋನಿಯಾ ಗಾಂಧಿಯವರ ಪ್ರಸ್ತುತ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಆಸ್ಪತ್ರೆ ಅಥವಾ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ.

error: Content is protected !!