
ಮಣಿಪಾಲ: ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಇಲ್ಲೊಬ್ಬ ಪಾಗಲ್ ಪ್ರೇಮಿ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಣಿಪಾಲ ಶಾಂತಿನಗರ ಎಂಬಲ್ಲಿ ಮಂಗಳವಾರ(ಮೇ 12) ರಾತ್ರಿ ನಡೆದಿದೆ.

ಅಂಕೋಲ ಮೂಲದ ಯೋಗೀತಾ (23) ಗಂಭೀರವಾಗಿ ಗಾಯಗೊಂಡ ಯುವತಿ.

ಯೋಗೀತಾ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರು ಶಾಂತಿನಗರದ ಐಡಿಯಲ್ ಬಿಲ್ಡಿಂಗ್‌ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದಾರೆ. ಆಕೆಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯೋಗೀತಾ ಆತನ ಪ್ರೀತಿಯನ್ನು ನಿರಾಕರಿಸಿದ್ದು, ಇದರಿಂದ ಕೋಪಗೊಂಡ ಆರೋಪಿ ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.