ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾದ ಬಸ್: ಐವರು ಸಾ*ವು, ನಾಲ್ವರ ಸ್ಥಿತಿ ಗಂಭೀರ

ಹೈದರಾಬಾದ್: ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್​ನಲ್ಲಿ ಮಂಗಳವಾರ ಬೆಳಗ್ಗೆ(ಮೇ 12) ನಡೆದಿದೆ.

ಬಸ್ ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರ ಜೊತೆಗೆ ಇಬ್ಬರು ಮೋಟಾರ್ ಸೈಕಲ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ರಕ್ಷಣೆಗೆ ಧಾವಿಸಿದ್ದು, ಉಳಿದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. 10 ಮಂದಿಗೆ ಗಂಭೀರ ಗಾಯವಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ, ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!