
ಕಲಬುರಗಿ: ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಮಂಗಳವಾರ(ಮೇ 12) ರಾತ್ರಿ ಚಿತ್ತಾಪುರ ತಾಲೂಕಿನ ಅಲ್ಲೂರ್ ಗ್ರಾಮದ ಕೆರೆಯ ಬಳಿ ನಡೆದಿದೆ.

ಸಿದ್ದಪ್ಪ ಮಲ್ಲಪ್ಪ ಹುಳಗೊಳರ್ (25) ಕೊಲೆಯಾದ ಯುವಕ.

ಹಳೇ ದ್ವೇಷದಿಂದಾಗಿ ಈ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.