ನೆರೆ ಮನೆಯವನಿಂದಲೇ ತಾಯಿಯಿಲ್ಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!!

ಬೀದರ್: ಅಮ್ಮನ ಕಳೆದುಕೊಂಡಿದ್ದ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯವನೇ ಆತ್ಯಾಚಾರ ಎಸಗಿರುವ ಘಟನೆ ಬೀದರ್‌ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಧನರಾಜ್ ಕಾಂಬಳೆ(35) ಅತ್ಯಾಚಾರ ಎಸಗಿದ ಆರೋಪಿ.

ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಒಬ್ಬಳ್ಳನೇ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆದು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಸದ್ಯ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸಂತ್ರಸ್ತ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

error: Content is protected !!