
ಬೆಂಗಳೂರು: ಮೇ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ (PGCET) ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಹಾಗೆಯೇ ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
