
ಶಿವಮೊಗ್ಗ: ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಇಂದು(ಮೇ.14) ಬೆಳಗ್ಗೆ ಆನಂದಪುರದಲ್ಲಿ ನಡೆದಿದೆ.

ರತ್ನಮ್ಮ ಹೊಸಕೊಪ್ಪ ಗಾಯಗೊಂಡ ಮಹಿಳೆ.
ಬಸ್ ನಿಲ್ದಾಣದ ಮುಂಭಾಗ ರತ್ನಮ್ಮ ರಾ. ಹೆದ್ದಾರಿಯನ್ನು ದಾಟುತ್ತಿದ್ದ ಸಂದರ್ಭ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಲ್ಲಿದ್ದ ಸ್ಥಳೀಯರು ರತ್ನಮ್ಮ ಅವರನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ತೀವ್ರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ವಾಹನ ಪತ್ತೆ ಹಚ್ಚುವಲ್ಲಿ ಮುಂದಾಗಿದ್ದಾರೆ.