
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಸದ್ಯ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಈಗ ಲೀಟರ್‌ಗೆ 97.77 ರೂ.ಗಳಿಂದ 94.77 ರೂ.ಗಳಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ (Diesel Price) 87.67 ರೂ.ಗಳಿಂದ 90.67 ರೂ.ಗಳಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್‌ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ. ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. ಆಗಿದೆ.