
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಜಾಮೀನು ನಿರಾಕರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿರುವ ನಟ ದರ್ಶನ್ ಸೆಷನ್ಸ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ತೀವ್ರ ವಿಳಂಬ ಆಗುತ್ತಿದೆ ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್ನಲ್ಲಿ ಇಟ್ಟಿರುವುದನ್ನು ಆರೋಪಿಸಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ದರ್ಶನ್ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ವಾದ – ವಿವಾದಗಳನ್ನು ಆಲಿಸಿ ಮಹತ್ವದ ತೀರ್ಪು ನೀಡಿದೆ.

ಒಂದು ವರ್ಷ ಸಮಯಾವಕಾಶ ನೀಡುತ್ತೇವೆ. ಆ ನಿಗದಿತ ಸಮಯದ ಒಳಗೆ ವಿಚಾರಣೆ ಪೂರ್ಣಗೊಳಿಸದಿದ್ದರೆ ಆಗ ಜಾಮೀನಿಗೆ ಅರ್ಜಿ ಸಲ್ಲಿಸಿ, ಅದನ್ನ ಪರಿಶೀಲನೆ ಮಾಡೋಣ, ಜೊತೆಗೆ ಆರೋಪಿಗೆ ಇತರೆ ಕೈದಿಗಳಿಗೆ ನೀಡಿರುವ ಸವಲತ್ತುಗಳನ್ನೇ ನೀಡಬೇಕು ಎಂದು ಸೂಚಿಸಿದರು ಕ್ವಾರಂಟೈನ್ ಸೆಲ್ ಬಗ್ಗೆ ಯಾವುದೇ ಸೂಚನೆ ಅಥವಾ ಆದೇಶವನ್ನು ನೀಡುವುದಿಲ್ಲವೆಂದು ನ್ಯಾಯಮೂರ್ತಿಗಳು ಹೇಳಿದರು.
