ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸುಟ್ಟು ಭಸ್ಮ!!

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಶುಕ್ರವಾರ(ಮೇ 15) ತಡರಾತ್ರಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಸ್‌ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಟೈರ್ ಸ್ಫೋಟವಾದ ತತ್ ಕ್ಷಣ ಚಾಲಕ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಯಾಣಿಕರೆಲ್ಲರೂ ಕೆಳಗಿಳಿದ ಪರಿಣಾಮ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಬೆಂಕಿ ಕ್ಷಣಮಾತ್ರದಲ್ಲಿ ಹೊತ್ತಿಕೊಂಡ ಪರಿಣಾಮ ಪ್ರಯಾಣಿಕರ ಬ್ಯಾಗ್‌ಗಳು ಮೊಬೈಲ್‌ಗಳು ಹಾಗೂ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತತ್ ಕ್ಷಣ ದೌಡಾಯಿಸಿದ್ದಾರೆ.

error: Content is protected !!