ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ; ಬಸ್ ಪಲ್ಟಿ

ತೀರ್ಥಹಳ್ಳಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಕೈಮರದ ಬಳಿ ಇಂದು(ಮೇ 16)ನಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿ ಖಾಸಗಿ ಬಸ್ ಪಲ್ಟಿ ಹೊಡೆದಿದೆ.

ಬಳ್ಳಾರಿ ಮೂಲದ ಬಸ್ ಹಾಗೂ ಕಾರು ಶಿವಮೊಗ್ಗ ಮೂಲದವರದ್ದಾಗಿದ್ದು, ಬಸ್ಸಿನಲ್ಲಿ ಹಾಗೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿದ್ರೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

error: Content is protected !!