ಪೊಲೀಸ್ ಸಿಬ್ಬಂದಿಯ ಮನೆಯಲ್ಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!!

ಬೆಳ್ತಂಗಡಿ: ಪೊಲೀಸ್ ಪಡೆಯ ಹೆಡ್‍ಕಾನ್ಸ್ಟೇಬಲೋರ್ವರ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕದ್ದೊಯ್ದ ಘಟನೆ ಶುಕ್ರವಾರ(ಮೇ 15) ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದ ಗಾಡಕೋಡಿ ಎಂಬಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ರಾಜ್ಯ ಮೀಸಲು ಪೊಲೀಸ್ ಪಡೆಯ (KSRP) ಗುಪ್ತವಾರ್ತೆ ವಿಭಾಗದ ಹೆಡ್ ಕಾನ್ಸ್ಟೇಬಲ್ ಆಗಿರುವ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂಪಾಯಿ ನಗದು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಕರುಣಕಾರ ಗೌಡ ಅವರ ಮನೆಯಲ್ಲಿ ಪತ್ನಿ ತನ್ನ ಕೊಠಡಿಯಲ್ಲಿ ಚಿನ್ನಾಭರಣವನ್ನು ಕಪಾಟಿನಲ್ಲಿರಿಸಿ ಅದಕ್ಕೆ ಬೀಗ ಹಾಕಿ ಬೀಗದ ಕೀಯನ್ನು ತನ್ನೊಂದಿಗೆ ಕೊಂಡೊಯ್ದಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಒಂಟಿಯಾಗಿದ್ದ ಕರುಣಾಕರ ಗೌಡ ರವರು ಐಪಿಎಲ್ ಪಂದ್ಯಾಟವನ್ನು ವೀಕ್ಷಿಸಿ ಮಲಗಿದ್ದವರು ಬೆಳಗ್ಗೆ ಎದ್ದಾಗ ಪತ್ನಿಯ ಕೋಣೆಯ ಬೀಗ ಒಡೆದಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಕೋಣೆಯೊಳಗಿದ್ದ ಕಪಾಟಿನ ಬೀಗ ಮುರಿದು ಕಪಾಟಿನೊಳಗಿದ್ದ 14 ಲಕ್ಷ ರೂ. ಮೌಲ್ಯದ ಹನ್ನೆರಡುವರೆ ಪವನ್ ತೂಕದ ಚಿನ್ನಾಭರಣಗಳನ್ನು ಹಾಗೂ 80 ಸಾವಿರ ರೂ. ಮೌಲ್ಯದ ವಜ್ರದ ಆಭರಣವನ್ನು ಮತ್ತು 1 ಲಕ್ಷ ರೂ ನಗದು ಹಣವನ್ನು ಕದ್ದೊಯ್ದಿರುವುದು ಬೆಳಕಿಗೆ ಬಂದಿದೆ.

error: Content is protected !!