ಮಕ್ಕಳಾಗಲಿಲ್ಲ ಅಂತ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು!

ಚಿಕ್ಕಬಳ್ಳಾಪುರ: ಮಕ್ಕಳಾಗಲಿಲ್ಲ ಅಂತ ಮನನೊಂದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.

ರುಚಿತಾ(24) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ಚಿಕ್ಕಬಳ್ಳಾಪುರ ತಾಲೂಕಿನ ದರಬೂರು ಗ್ರಾಮದ ರುಚಿತಾಗೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಗ್ರಾಮದ ಕೇಶವ ಜೊತೆ 4 ವರ್ಷಗಳ ಹಿಂದೆ ಮದುವೆಯಾಗಿದ್ದರು. ಗಂಡ-ಹೆಂಡತಿ ನಡುವೆ ಬೇರೆ ಮನೆ ಮಾಡುವ ವಿಚಾರದಲ್ಲಿ ವೈಮನಸ್ಸು ಮಾಡಿದ್ದು, ಮಂಚನಬಲೆಯ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಮನನೊಂದು ರುಚಿತಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!