ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ; ಲಾರಿಯಲ್ಲಿದ್ದ ಸಾಮಾಗ್ರಿಗಳು ಬೆಂಕಿಗಾಹುತಿ

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಎಂಬಲ್ಲಿ ಬೆಂಕಿ ಹತ್ತಿಕೊಂಡಿದ್ದು, ಬೆಂಗಳೂರು ಮೂಲದ ಲಾರಿ ಇದಾಗಿದೆ. ಈ ಲಾರಿ ಗುಜಿರಿ ಸಾಮಾಗ್ರಿಗಳ ಸಾಗಾಟದ ನಡೆಸುತ್ತಿದ್ದು, ಲಾರಿಯಲ್ಲಿ ತುಂಬಿಸಿದ್ದ ಗುಜರಿ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದೆ.

ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಗುಜಿರಿಯಲ್ಲಿದ್ದ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಹಾಗಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

error: Content is protected !!