ಬೈಕ್-ಕಾರು ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾ*ವು!!

ಬೆಳ್ತಂಗಡಿ: ಬೈಕ್ ಮತ್ತು ಕಾರು ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ.

ಬಳಂಜದ ಪ್ರಸಿದ್ಧ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (30) ಮೃತ ಮಹಿಳೆ.

ಅನಿಲ್ ಭಟ್ ಮತ್ತು ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ.

ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!