
ಉಡುಪಿ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಕೊಲ್ಲೂರು ಬಳಿ ಎಂಬಲ್ಲಿ ಭಾನುವಾರ(ಮೇ 17) ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜ್ಯೋತಿ(34),ಆರ್ಯ ಅನೂಪ್ (26)ಮೃತರು. ಆಯನ್(5), ಅವನಿ(8) ಅರ್ಜುನ್(9), ಮಿನಿ(60), ಅಬೆ(37), ಅನೂಪ್ (37) ಜ್ಯೋತಿ(43), ಜೀಪ್ ಚಾಲಕ ದೇವರಾಜ್ ಅಪಘಾತದಲ್ಲಿ ಗಂಭೀರ ಗಾಯಗೊಂಡವರು.

ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಕಡೆಯತ್ತ ಸಾಗುತ್ತಿದ್ದ ಟೆಂಪೋ ಮಧ್ಯೆ ಈ ಅಪಘಾತ ನಡೆದಿದ್ದು, ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರೆಂದು ತಿಳಿದುಬಂದಿದೆ.

ಕೊಲ್ಲೂರು ಠಾಣೆ ಪಿಎಸ್‌ಐಗಳಾದ ವಿನಯ್ ಎಂ.ಕೊರ್ಲಹಳ್ಳಿ, ಭೀಮಾಶಂರ್ಕ ಸ್ಥಳಕ್ಕೆ ಹಾಗೂ ಗಾಯಾಳುಗಳಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.