ಬೆಂಗಳೂರು: ಕೇರಳ ರಾಜ್ಯದ ನಿಯೋಜಿತ ಮುಖ್ಯಮಂತ್ರಿಗಳಾದ ವಿ.ಡಿ. ಸತೀಶನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು.





ಈ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ , ವೈನಾಟ್ ಲೋಕಸಭಾ ಕ್ಷೇತ್ರದ ಸಂಸದೆಯಾದ ಪ್ರಿಯಾಂಕ ಗಾಂಧಿ ವಾದ್ರ , ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕರ್ನಾಟಕದ ಉನ್ನತ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಸಹಿತ ರಾಜ್ಯದ ಹಲವು ಗಣ್ಯರು ಪಾಲ್ಗೊಂಡು ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ನೆರೆ ರಾಜ್ಯದ ನೂತನ ಸರ್ಕಾರದ ಈ ಮಹತ್ವದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಹಲವು ಸಚಿವರು ಹಾಗೂ ಶಾಸಕರುಗಳು ಭಾಗವಹಿಸುವ ಮೂಲಕ ನೂತನ ಸಿಎಂ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
