ಜೂನ್ 1 ರಿಂದ ವಾಮದಪದವು ಬೀಡಿ ಕಾರ್ಮಿಕರ ಚಿಕಿತ್ಸಾಲಯ ಶಾಶ್ವತ ಬಂದ್: ಪರ್ಯಾಯ ವ್ಯವಸ್ಥೆ ಪ್ರಕಟ

ಮಂಗಳೂರು: ಭಾರತ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಸಾರ್ವಜನಿಕ ಸೇವೆ ನೀಡುತ್ತಿದ್ದ ‘ಬೀಡಿ ಕಾರ್ಮಿಕರ ಚಿಕಿತ್ಸಾಲಯ’ವನ್ನು ಮುಂಬರುವ ಜೂನ್ 1 ರಿಂದ ಜಾರಿಗೆ ಬರುವಂತೆ ಸಂಪೂರ್ಣವಾಗಿ ಮುಚ್ಚಲಾಗುತ್ತಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇಲಾಖೆಯ ಈ ನಿರ್ಧಾರದಿಂದಾಗಿ ವಾಮದಪದವು ಚಿಕಿತ್ಸಾಲಯದ ವ್ಯಾಪ್ತಿಗೆ ಒಳಪಡುತ್ತಿದ್ದ ಸ್ಥಳೀಯ ಬೀಡಿ ಕಾರ್ಮಿಕರಿಗೆ ಪರ್ಯಾಯ ಚಿಕಿತ್ಸಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇನ್ನು ಮುಂದೆ ಈ ಭಾಗದ ಫಲಾನುಭವಿ ಕಾರ್ಮಿಕರು ತಮ್ಮ ಆರೋಗ್ಯ ತಪಾಸಣೆ, ಮುಂದಿನ ಚಿಕಿತ್ಸೆ ಹಾಗೂ ಅಗತ್ಯ ಔಷಧಿಗಳಿಗಾಗಿ ಮೂಡಬಿದಿರೆಯ ಮಹಾವೀರ ಕಾಲೇಜು ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಬೀಡಿ ಕಾರ್ಮಿಕರ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು” ಸಂಪರ್ಕಿಸಿ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

error: Content is protected !!