ಹಳಿತಪ್ಪಿದ ಉಜ್ಜಯಿನಿ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು!

ಉತ್ತರಾಖಂಡ: ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ ಘಟನೆ ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ಸೋಮವಾರ(ಮೇ 18) ರಾತ್ರಿ ಸುಮಾರು 9.30 ರ ವೇಳೆಗೆ ನಡೆದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ.

ನಿಯಮಿತ ನಿರ್ವಹಣಾ ಕಾರ್ಯಗಳ ವೇಳೆ ಬ್ರೇಕ್ ವೈಫಲ್ಯ ಸಂಭವಿಸಿರುವುದು ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಪೂರ್ಣ ರೈಲು ಚಲಿಸಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಅಪಘಾತ ನಡೆದ ಸ್ಥಳಕ್ಕೆ ಸುಮಾರು ಎರಡೂವರೆ ಗಂಟೆಗಳ ಬಳಿಕ ತಲುಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದ ನಂತರ ಸರ್ಕಾರಿ ರೈಲ್ವೆ ಪೊಲೀಸ್ ಸಿಬ್ಬಂದಿ ಸ್ಥಳವನ್ನು ತಮ್ಮ ವಶಕ್ಕೆ ಪಡೆದು ಅಲ್ಲಿದ್ದ ಜನರನ್ನು ತೆರವುಗೊಳಿಸಿದರು. ಈ ಘಟನೆ ಕುರಿತು ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ.

error: Content is protected !!