ಉಳ್ಳಾಲ: ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆ!!

ಉಳ್ಳಾಲ: ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

error: Content is protected !!