ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಸಾ*ವು !!

ಬ್ರಹ್ಮಾವರ: ಸಾಸ್ತಾನದ ಕೋಸ್ಟಲ್‌ ಪ್ಯಾರಡೈಸ್‌ ಹೋಟೆಲ್‌ ಸಮೀಪ ಮಂಗಳವಾರ(ಮೇ 19) ಸಂಜೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್‌ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಎಲ್‌ಐಸಿ ನಿವೃತ್ತ ಅಧಿಕಾರಿ ರಾಘವೇಂದ್ರ ಉಪಾಧ್ಯಾಯ (75) ಮೃತ ವ್ಯಕ್ತಿ.

ರಾಘವೇಂದ್ರ ಅವರು ರಾಷ್ಟ್ರೀಯ ಹೆದ್ದಾರಿಯ ಪೂರ್ವಭಾಗದಿಂದ ಪಶ್ಚಿಮ ಭಾಗಕ್ಕೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಕುಂದಾಪುರ ಕಡೆ ತೆರಳುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿದ್ದು, ಈ ವೇಳೆ ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಕೋಟ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!