ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ!!

ಕಾರ್ಕಳ: ಬೆಳ್ಮಣ್ ಪಂಚಾಯತ್ ಕಚೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಲಾರಿಯ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬುಧವಾರ(ಮೇ 20) ಸಂಜೆ ನಡೆದಿದೆ.

ನಂದಳಿಕೆಯ ಕ್ರಷರ್‌ನಿಂದ ಜೆಲ್ಲಿಯನ್ನು ತುಂಬಿಕೊಂಡು ಕಾರವಾರ ಕಡೆಗೆ ಹೋಗುವಾಗ ಪಂಚಾಯತ್ ಪಾರ್ಕಿಂಗ್ ಪ್ರದೇಶದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಅದೇ ಸಮಯದಲ್ಲಿ, ಮೂಡಿಗೆರೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅತಿ ವೇಗದಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇತರ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

error: Content is protected !!